ರೈಲ್ವೆ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

Update: 2019-08-16 16:28 GMT

ಹೊಸದಿಲ್ಲಿ, ಆ.16: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯ ನನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ.

ಶುಕ್ರವಾರ ದಿಲ್ಲಿಯಲ್ಲಿ ಭೇಟಿ ಮಾಡಿದ ಅವರು, ಬೆಂಗಳೂರು ಸಬ್ಅರ್ಬನ್ ರೈಲ್ವೆ, ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ಬಲವರ್ಧನೆ, ಹಾಸನ-ಬೇಲೂರು-ಶೃಂಗೇರಿ ಹೊಸ ರೈಲು ಮಾರ್ಗ, ಬೀದರ್-ನಾಂದೇಡ್ ರೈಲು ಮಾರ್ಗ ಸೇರಿದಂತೆ ಇನ್ನಿತರ ಯೋಜನೆಗಳ ಅನುಷ್ಠಾನ ಸಂಬಂಧ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಮಾಜಿ ಡಿಸಿಎಂ ಆರ್.ಅಶೋಕ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಹಿರಿಯ ಮುಖಂಡ ಗೋವಿಂದ ಕಾರಜೋಳ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News