ನಿಸ್ವಾರ್ಥ ಸೇವೆ ಗುಣವನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ಬಿಷಪ್ ಜೆರಾಲ್ಡ್ ಲೋಬೊ

Update: 2019-08-16 16:28 GMT

ಉಡುಪಿ, ಆ.16: ಮೇರಿ ಮಾತೆಯಂತೆ, ದೇವರ ವಾಕ್ಯದಂತೆ ನಡೆಯುವು ದರೊಂದಿಗೆ ಸಮಾಜದಲ್ಲಿ ನಿಸ್ವಾರ್ಥ ಸೇವೆಯನ್ನು ನೀಡುವ ಗುಣವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ. ಡಾ.ೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.

ಗುರುವಾರ ಸಂಜೆ ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ಚರ್ಚಿನಲ್ಲಿ ವೆಲಂಕಣಿ ಮಾತೆಯ ಪ್ರತಿಷ್ಠಾಪನಾ ಮಹೋತ್ಸವದ ಪ್ರಧಾನ ಬಲಿಪೂಜೆಯ ನೇತೃತ್ವ ವಹಿಸಿ ಅವರು ಸಂದೇಶ ನೀಡಿದರು.

ಮೇರಿ ಮಾತೆ ಸಾಮಾನ್ಯ ಕುಟುಂಬಂದಿಂದ ಬಂದು ಸಾಮಾನ್ಯರಂತೆ ಬದುಕಿ ತೋರಿಸಿದ್ದಲ್ಲದೆ ದೇವರ ವಾಕ್ಯದಂತೆ ನಡೆದು ನಿಸ್ವಾರ್ಥ ಸೇವೆಗೈದು ಮಾದರಿ ಯಾದರು. ಅವರು ತಮ್ಮ ಜೀವನವನ್ನೇ ದೈವ ಸೇವೆಗೆ ಸಮರ್ಪಿಸಿಕೊಂಡಿದ್ದಲ್ಲದೆ ಯೇಸು ಸ್ವಾಮಿಯ ಒರ್ವ ಮಾದರಿ ತಾಯಿಯಾಗಿ ಬದುಕಿದರು. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕಾಗಿದೆ ಎಂದರು.

ಉಡುಪಿ ವಲಯ ಪ್ರಧಾನ ಧರ್ಮಗುರು ವಂ. ವೆಲೇರಿಯನ್ ಮೆಂಡೊನ್ಸಾ, ಶಿರ್ವ ವಲಯ ಪ್ರಧಾನ ಧರ್ಮಗುರು ವಂ. ಡೆನಿಸ್ ಡೇಸಾ, ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತಗಳ ವಿವಿಧ ಚರ್ಚುಗಳ ಸುಮಾರು 20ಕ್ಕೂ ಅಧಿಕ ಧರ್ಮಗುರುಗಳು ಹಬ್ಬದ ಬಲಿಪೂಜೆಯಲ್ಲಿ ಭಾಗವಹಿಸಿದ್ದರು.

ಚರ್ಚಿನ ಪ್ರಧಾನ ಧರ್ಮಗುರು ವಂ.ಆಲ್ಬನ್ ಡಿಸೋಜಾ, ವಾರ್ಷಿಕ ಮಹೋತ್ಸವ ಕಾರ್ಯಕ್ರಮದ ಸಂಚಾಲಕ ವಂ. ಪ್ರವೀಣ್ ಮೊಂತೆರೋ, ಚರ್ಚ್‌ಪಾಲನಾ ಮಂಡಳಿ ಉಪಾಧ್ಯಕ್ಷ ಸಂಜಯ್ ಅಂದ್ರಾದೆ, ಕಾರ್ಯದರ್ಶಿ ಶೋಭಾ ಮೆಂಡೋನ್ಸಾ, ಚರ್ಚಿನ 18 ಆಯೋಗಗಳ ಸಂಚಾಲಕ ಫ್ರಾನ್ಸಿಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಹಬ್ಬದ ಪ್ರಯಕ್ತ ಬೆಳಿಗ್ಗೆ 8 ಗಂಟೆಗೆ ಕೊಂಕಣಿಯಲ್ಲಿ ದಿವ್ಯ ಬಲಿಪೂಜೆ ಬಳಿಕ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನಡೆಯಿತು. 2 ಗಂಟೆಗೆ ಕೊಂಕಣಿಯಲ್ಲಿ, ಸಂಜೆ 6 ಗಂಟೆಗೆ ಕನ್ನಡದಲ್ಲಿ ಹಾಗೂ ರಾತ್ರಿ 8 ಗಂಟೆಗೆ ಇಂಗ್ಲಿಷ್‌ನಲ್ಲಿ ಬಲಿಪೂಜೆಗಳು ಜರುಗಿದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News