ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು

Update: 2019-08-16 18:34 GMT

ಶಿವಮೊಗ್ಗ, ಆ. 16: ವೇಗವಾಗಿ ಆಗಮಿಸಿದ ಬೈಕ್‍ವೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ವೆಂಕಟೇಶನಗರ - ಯಲವಟ್ಟಿ ರಸ್ತೆಯಲ್ಲಿ ನಡೆದಿದೆ. 

ಅಮರಾವತಿ ಕ್ಯಾಂಪ್‍ನ ನಿವಾಸಿ ರವಿಚಂದ್ರ (23) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇವರ ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದು ಅಸುನೀಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News