ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ಯೋಧ ಹುತಾತ್ಮ
Update: 2019-08-17 15:21 IST
ಜಮ್ಮು, ಆ.17: ಇಲ್ಲಿನ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಗಡಿ ನಿಯಂತ್ರಣ ರೇಖೆಯ ಬಳಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ತಮ್ಮ ನಾಲ್ವರು ಸೈನಿಕರು ಸತ್ತಿದ್ದಾರೆ ಎಂದು ಪಾಕಿಸ್ತಾನ ಆರೋಪಿಸಿದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ.
ಡೆಹ್ರಾಡೂನ್ ನ ನಿವಾಸಿ ಲ್ಯಾನ್ಸ್ ನಾಯ್ಕ್ ಸಂದೀಪ್ ಥಾಪಾ (35) ಹುತಾತ್ಮರಾದ ಯೋಧ. ಪಾಕಿಸ್ತಾನ ಸೇನೆ ನಡೆಸಿದ ದಾಳಿಯಲ್ಲಿ ಇವರು ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.