ಭಯೋತ್ಪಾದನಾ ದಾಳಿ ಭೀತಿ: ಕರಾವಳಿಯಲ್ಲಿ ರೆಡ್ ಅಲರ್ಟ್

Update: 2019-08-17 12:35 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಆ.17: ಮಹಾನಗರಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಭಯೋತ್ಪಾದನಾ ದಾಳಿಗೆ ಹೊಂಚು ಹಾಕಲಾಗುತ್ತಿದೆ ಎಂಬ ಗುಪ್ತಚರ ವರದಿ ಆಧರಿಸಿ ಮಂಗಳೂರು ನಗರದಾದ್ಯಂತ ಪೊಲೀಸರು ಶನಿವಾರವೂ ಕಟ್ಟೆಚ್ಚರ ವಹಿಸಿದ್ದಾರೆ.

ಕರಾವಳಿ ಸಹಿತ ಸಮುದ್ರ ಪ್ರದೇಶದಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ವಿದೇಶಿ ಅಥವಾ ಸಂಶಯಾಸ್ಪದ ಬೋಟ್ ಸಂಚರಿಸುತ್ತಿದ್ದರೆ ತಿಳಿಸುವಂತೆ ಮೀನುಗಾರರಿಗೆ ಇಲಾಖೆ ಸೂಚನೆ ನೀಡಿದೆ.

ನವಮಂಗಳೂರು ಬಂದರು, ಎಂಆರ್‌ಪಿಎಲ್, ಎನ್‌ಐಟಿಕೆ, ಕೆಐಒಸಿಎಲ್, ನಗರ ವಾಣಿಜ್ಯ ಸಮುಚ್ಛಯ, ಆಸ್ಪತ್ರೆ, ಹೊಟೇಲ್‌ಗಳಲ್ಲಿ ಪೊಲೀಸರು, ಶ್ವಾನದಳ, ಬಾಂಬ್ ಪತ್ತೆ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆಯಕಟ್ಟಿನ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಮೇಲೂ ತೀವ್ರ ನಿಗಾ ಇಡಲಾಗಿದೆ.

ಕೇಂದ್ರ ಗುಪ್ತಚರ ವರದಿ ಆಧರಿಸಿ ಎಲ್ಲ ಪೊಲೀಸ್ ಕಮಿಷನರೇಟ್‌ಗಳ ಆಯುಕ್ತರಿಗೆ ಮತ್ತು ಪ್ರಮುಖ ಜಿಲ್ಲೆಗಳ ಎಸ್‌ಪಿಗಳಿಗೆ ತುರ್ತು ಸಂದೇಶ ನೀಡಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಕಟ್ಟೆಚ್ಚರ ವಹಿಸುವಂತೆ ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News