ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Update: 2019-08-17 12:42 GMT

ಶಿವಮೊಗ್ಗ, ಆ.17: ಎಸೆಸೆಲ್ಸಿಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್.ನಗರದಲ್ಲಿ ನಡೆದಿದೆ. 

ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದ ರುಹಿನಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News