ಏಮ್ಸ್ ನಲ್ಲಿ ಭಾರೀ ಅಗ್ನಿ ಅವಘಡ: ಸ್ಥಳಕ್ಕೆ ದೌಡಾಯಿಸಿದ 34 ಅಗ್ನಿಶಾಮಕ ವಾಹನಗಳು

Update: 2019-08-17 13:00 GMT
Photo: www.msn.com

ಹೊಸದಿಲ್ಲಿ, ಆ.17: ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 34 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿವೆ.  ರಕ್ಷಣಾ ಕಾರ್ಯಾಚರಣೆ ಈಗಾಗಲೇ ಆರಂಭವಾಗಿದ್ದು, ಬೆಂಕಿ ವ್ಯಾಪಿಸುತ್ತಿದೆ.

ಎಮರ್ಜೆನ್ಸಿ ವಾರ್ಡ್ ಸಮೀಪದ ಕಟ್ಟಡದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಜನರನ್ನು ಸ್ಥಳಾಂತರಿಸುತ್ತಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಟ್ಟಡದಲ್ಲಿ ರೋಗಿಗಳಿರಲಿಲ್ಲ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News