ಪ.ಜಾತಿ/ ಪಂಗಡದ ಕಲಾಸಕ್ತರಿಗೆ ಜಾನಪದ ತರಬೇತಿ

Update: 2019-08-17 15:03 GMT

ಉಡುಪಿ, ಆ.17: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2019-20ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ, ನೃತ್ಯ ಹಾಗೂ ಜಾನಪದ ಕಲಾಪ್ರಕಾರಗಳಲ್ಲಿ ಆರು ತಿಂಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಶಿಬಿರದಲ್ಲಿ ವಿಶೇಷ ಘಟಕ ಯೋಜನೆಯಡಿ 20 ಮಂದಿ ಹಾಗೂ ಗಿರಿಜನ ಉಪಯೋಜನೆಯಡಿ 8 ಮಂದಿ ಶಿಬಿರಾರ್ಥಿಗಳಿಗೆ ಮಾಹೆಯಾನ 1,000 ರೂ. ಶಿಷ್ಯವೇತನ ನೀಡಲಾಗುವುದು. ಶಿಬಿರಾರ್ಥಿಗಳ ವಯಸ್ಸು ಕನಿಷ್ಟ 18 ರಿಂದ 35 ವರ್ಷದ ಒಳಗಿರಬೇಕು. ಮಹಿಳೆಯರಿಗೆ ಮತ್ತು ಅಂಗವಿಕಲರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ತರಬೇತಿ ನೀಡಲಿಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದಲೂ (ತರಬೇತುದಾರರು) ಅರ್ಜಿಯನ್ನು ಆಹ್ವಾನಿಸಲಾಗಿದೆ. ತರಬೇತುದಾರರಿಗೆ ಮಾಸಿಕ 8,000 ರೂ. ಸಂಭಾವನೆ ನಿಗದಿಪಡಿಸಲಾಗಿದೆ. ಸ್ವವಿರಗಳನ್ನು ಒಳಗೊಂಡ ಅರ್ಜಿಯನ್ನು ಇತ್ತೀಚಿನ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದೊಂದಿಗೆ ಆ.28ರೊಳಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 0820-2986168 ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾುಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 0820-2986168 ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News