ಅವಹೇಳನಕಾರಿ ಸಂದೇಶ ರವಾನೆ ಆರೋಪ: ಕಡಬದ ಸರ್ವೇಯರ್‍ಗೆ ಜಾಮೀನು

Update: 2019-08-17 15:47 GMT

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ರವಾನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕಡಬದ ಸರ್ವೇ ಇಲಾಖೆಯ ಸರ್ವೇಯರ್ ಮಹೇಶ್ ಎಂಬವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ.

ಮಹೇಶ್ ಅವರು ಆರೆಸ್ಸೆಸ್ ಮತ್ತು ಪ್ರಧಾನಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಡಬದ ಹಿಂದೂ ಜಾಗರಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ವೆಂಕಟ್ರಮಣ ಕುತ್ಯಾಡಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನಲೆಯಲ್ಲಿ ಪೊಲೀಸರು ಮಹೇಶ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ಪುತ್ತೂರು ವ್ಯವಹಾರಿಕ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ್ ಎಂ ಅವರು ಮಹೇಶ್ ಗೆ ಶರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದ್ದಾರೆ.

ಮಹೇಶ್ ಪರವಾಗಿ ನ್ಯಾಯವಾದಿಗಳಾದ ಅಶ್ರಫ್ ಕೆ ಅಗ್ನಾಡಿ, ಅಬ್ದುಲ್ ಮಜೀದ್ ಖಾನ್ ಮತ್ತು ಮುಸ್ತಫಾ ಎಂ ಜಾಮೀನು ಅರ್ಜಿ ಸಲ್ಲಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News