ಮಾದಕ ವಸ್ತು ಮಾರಾಟ ಯತ್ನ: ಆರೋಪಿ ಬಂಧನ, 2.4 ಕೆಜಿ ಆಫೀಮು ಜಪ್ತಿ

Update: 2019-08-17 15:54 GMT

ಬೆಂಗಳೂರು, ಆ.17: ಕಾನೂನು ಬಾಹಿರ ಮಾದಕವಸ್ತು ಅಫೀಮು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿದಡಿ ವ್ಯಕ್ತಿಯೋರ್ವನನ್ನು ಬಂಧಿಸಿರುವ ಇಲ್ಲಿನ ಗಿರಿನಗರ ಠಾಣಾ ಪೊಲೀಸರು, ಬರೋಬ್ಬರಿ 2.4 ಕೆಜಿ ಆಫೀಮು ಜಪ್ತಿ ಮಾಡಿದ್ದಾರೆ.

ರಾಜಸ್ತಾನ ಮೂಲದ ಸುರೇನ್ ಯಾನೆ ಬಾಬುಲಾಲ್ ಬಂಧಿತ ಆರೋಪಿಯಾಗಿದ್ದು, ಈತ ಡಿ ಗ್ರೂಪ್ ಲೇಔಟ್‌ನ ಗಣೇಶ್ ದೇವಾಲಯದ ಬಳಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು ಎದುರು, 100ಅಡಿ ರಿಂಗ್ ರಸ್ತೆ, ವಸುಂಧರ ಕೃತ್ತಿಕಾ ಅಪಾರ್ಟ್‌ಮೆಂಟ್ ಬಳಿ ವ್ಯಕ್ತಿಯೊಬ್ಬ ಮಾದಕ ವಸ್ತು ಅಫೀಮು ಇಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡಿ ಹಣ ಪಡೆದುಕೊಳ್ಳಲು ಯತ್ನಿಸುತ್ತಿದ್ದಾನೆ ಎಂಬ ಮಾಹಿತಿ ಆಧಾರಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತನಿಂದ 10.80 ಲಕ್ಷ ರೂ. ಮೌಲ್ಯದ ಬರೋಬ್ಬರಿ 2.4 ಕೆಜಿ ಅಫೀಮು ಜಪ್ತಿ ಮಾಡಲಾಗಿದೆ.ಆರೋಪಿ ಸುರೇಶ್ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ನಗರದ ದಕ್ಷಿಣ ವಿಭಾಗದ ಡಿಸಿಪಿ ಡಾ.ರೋಹಿಣಿ ಕಟೋಚ್ ಸೆಪಟ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News