ಆ.20ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

Update: 2019-08-17 16:40 GMT

ಮಂಗಳೂರು, ಆ.17: ದ.ಕ. ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳನ್ನು ಆ. 20, 21ರಂದು ಹಮ್ಮಿಕೊಳ್ಳಲಾಗಿದೆ.

ಆ.20ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕೊಯಿಲ, ಸುಳ್ಯ ತಾಲೂಕಿನ ಬೆಳ್ಳಾರೆ ಭಾಗದಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ಆ.21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಆರೋಗ್ಯ ಶಿಬಿರ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News