×
Ad

ಚೆನ್ನೈ ಕ್ರೆಸೆಂಟ್ ಸಂಸ್ಥೆಯಿಂದ ಕಾನೂನು ಮಹಾವಿದ್ಯಾಲ ಸ್ಥಾಪಿಸಲು ಒಪ್ಪಂದ ಪತ್ರಕ್ಕೆ ಸಹಿ

Update: 2019-08-17 22:51 IST

ಭಟ್ಕಳ: ಶತಮಾನೋತ್ಸವ ಸಮಾರಂಭ ಆಚಣೆಯಲ್ಲಿರುವ ಭಟ್ಕಳ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯು ಮುಂಬರುವ ಶೈಕ್ಷಣಿಕ ವರ್ಷದಿಂದ ಕಾನೂನು ಮಹಾವಿದ್ಯಾಲಯವನ್ನು ಸ್ಥಾಪಿಸುವ ಕುರಿತಂತೆ ಚೆನ್ನೈ ನ ಕ್ರೆಸೆಂಟ್  ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಸಂಸ್ಥೆಯೊಂದಿಗೆ ಒಪ್ಪಂದ ತಿಳಿವಳಿಕೆ ಪತ್ರಕ್ಕೆ ಶನಿವಾರ ನಡೆದ ಮುಸ್ಲಿಮ್ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳು, ಸವಾಲುಗಳು ಮತ್ತು ಪರಿಹಾರಗಳು ಎಂಬ ವಿಷಯದ ಕುರಿತು ಜರಗಿದ ಸೆಮಿನಾರ್ ನಲ್ಲಿ ಸಹಿ ಹಾಕಲಾಯಿತು.

ಈ ಸಂದರ್ಭದಲ್ಲಿ ಕ್ರೆಸೆಂಟ್  ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಚೈನ್ನೈ ಸಂಸ್ಥೆಯ ಮುಖ್ಯಸ್ಥ ರಾಜಾ ಹಸನ್, ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ, ಭಟ್ಕಳ ಉಪವಿಭಾಗಾಧಿಕಾರಿ ಸಾಜಿದ್ ಆಹಮದ್ ಮುಲ್ಲಾ, ಬ್ಯಾರಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸೈಯ್ಯದ್ ಮುಹಮ್ಮದ್ ಬ್ಯಾರಿ, ಮಂಗಳೂರು ಯೆನೆಪೋಯ ವಿಶ್ವವಿದ್ಯಾಲಯದ ಇಸ್ಲಾಮಿಕ್ ಅದ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ, ಖ್ಯಾತ ಚಿಂತಕ ಜಾವೀದ್ ಜಮೀಲ್, ಶತಮಾನೋತ್ಸವ ಸಮಿತಿ ಸಂಚಾಲಕ ಅಬ್ದುಲ್ ರಕೀಬ್ ಎಂ.ಜೆ, ಪ್ರಧಾನ ಕಾರ್ಯದಶಿ ಸಿದ್ದಿಖ್ ಇಸ್ಮಾಯಿಲ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಇಸ್ಹಾಖ್ ಶಾಬಂದ್ರಿ, ಅಂಜುಮನ್ ಇಂಜಿನೀಯರಿಂಗ್ ಕಾಲೇಜು ಪ್ರಾಂಶುಪಾಲ ಪ್ರೊ.ಮುಷ್ತಾಖ್ ಆಹ್ಮದ್ ಭಾವಿಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News