ಆ.18: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಳ್ತಂಗಡಿಗೆ
Update: 2019-08-17 22:57 IST
ಬೆಳ್ತಂಗಡಿ: ಪ್ರವಾಹದಿಂದ ಸಂಕಷ್ಟಕ್ಕೆ ಈಡಾಗಿರುವ ಪ್ರದೇಶಗಳಿಗೆ ಆ. 18ರಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿಗೆ ಆಗಮಿಸಲಿರುವ ಅವರು ಬಳಿಕ ದಿಡುಪೆ, ಚಾರ್ಮಾಡಿ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಹಾಗೂ ಪುರ್ನಸತಿ ಕೇಂದ್ರಗಳಿಗೆ ಭೇಟಿ ನೀಡಿ ಸಂತ್ರಸ್ಥರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪ್ರವಾಹಪೀಡಿತ ಪ್ರದೇಶಗಳಿಗೆ ರವಿವಾರ ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿ ಹಾಗೂ ಮಂಗಳೂರು ಶಾಖಾ ಮಠದ ಧರ್ಮಪಾಲನಾಧಾನಂದ ಸ್ವಾಮೀಜಿಯವರು ಭೇಟಿ ನೀಡಲಿದ್ದಾರೆ