ಮಡಿಕೇರಿ: ಯುವಕ ಸಂಶಯಾಸ್ಪದ ಸಾವು

Update: 2019-08-17 17:33 GMT

ಮಡಿಕೇರಿ ಆ.17: ಯುವಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ತ್ಯಾಗರಾಜ ಕಾಲೋನಿಯ ನಿವಾಸಿ ನಾಸೀರ್(36) ಎಂಬುವವರೆ ಮೃತ ವ್ಯಕ್ತಿ.  

ನಗರದ ಸಂಪಿಗೆಕಟ್ಟೆ ಬಳಿಯ ಹೋಂ ಸ್ಟೇ ಒಂದರಲ್ಲಿ ಕೆಲವರು ಇಸ್ಪೀಟ್ ಆಡುತ್ತಿರುವ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದಾಗ ಯುವಕನೋರ್ವ ತಪ್ಪಿಕೊಳ್ಳುವ ಭರದಲ್ಲಿ ಜಾರಿ ಬಿದ್ದು, ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದಾಗಿ ಆರೋಪಿಸಲಾಗಿದೆ. 

ಯುವಕನ ಪೋಷಕರು ಇದೊಂದು ಸಂಶಯಾಸ್ಪದ ಸಾವು ಎಂದು ಆರೋಪಿಸಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಾಸಿರ್ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News