ಹಾಸ್ಟೆಲ್ ವಿದ್ಯಾರ್ಥಿಗಳ ಸಾವು ಪ್ರಕರಣ: ಘಟನೆಗೆ ಕಾರಣವಾದ ಅಧಿಕಾರಿಗಳ ವಜಾಕ್ಕೆ ಎಸ್‌ಐಒ ಆಗ್ರಹ

Update: 2019-08-18 13:15 GMT

ಕೊಪ್ಪಳ, ಆ.18: ಇಲ್ಲಿನ ಬನ್ನಿಕಟ್ಟಿ ಹತ್ತಿರದ ಹೈಸ್ಕೂಲ್ ಹಾಸ್ಟೆಲ್‌ನಲ್ಲಿ ಶಾರ್ಟ್ ಸಕ್ಯೂರ್ಟ್‌ನಿಂದ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಪ್ರಕರಣದಲ್ಲಿ ಅಧಿಕಾರಗಳ ನಿರ್ಲಕ್ಷವೇ ಪ್ರಮುಖ ಕಾರಣವಾಗಿದೆ ಎಂದು ಎಸ್‌ಐಒ ಆಕ್ರೋಶ ವ್ಯಕ್ತಪಡಿಸಿದೆ. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಸ್‌ಐಒ, ಈ ಹಿಂದೆ ಹಲವು ಸಂಘಟನೆಗಳು ಹಾಸ್ಟೆಲ್ ಅವ್ಯವಸ್ಥೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೂ ಅಧಿಕಾರಿಗಳು ವಿದ್ಯಾರ್ಥಿಗಳ ಸುರಕ್ಷತೆಯನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮನೆಬಿಟ್ಟು ಶಿಕ್ಷಣ ಪಡೆಯಲು ಬರುವ ವಿದ್ಯಾರ್ಥಿಗಳ ಕುರಿತು ಸರಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಲಾಗಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕಳೆದುಕೊಂಡ ನೋವಿಗೆ ಪರಿಹಾರ ಕೊಡಲು ಸಾಧ್ಯವೇ. ಈ ಕೂಡಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಕಡೆಗಣಿಸಿ ಈ ದುರ್ಘಟನೆಗೆ ಕಾರಣವಾದ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ವಜಾಗೊಳಿಸಬೇಕು. ಹಾಗೂ ಸರಕಾರಿ ಹಾಸ್ಟೆಲ್‌ಗಳಲ್ಲಿನ ಅವ್ಯವಸ್ಥೆ ಸರಿಪಡಿಸುವುದರೊಂದಿಗೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿ ಪಡಿಸಬೇಕೆಂದು ಎಸ್‌ಐಒ ಪ್ರಕಟನೆಯಲ್ಲಿ ಒತ್ತಾಯಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News