ಶ್ರೀನಿವಾಸ್ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಸಮ್ಮೇಳನ

Update: 2019-08-18 14:07 GMT

ಮಂಗಳೂರು, ಆ.18: ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಆ್ಯಂಡ್ ಕಾಮರ್ಸ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ, ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ, ಇನ್‌ಸ್ಟಿಟ್ಯೂಟ್ ಆಫ್ ಪ್ರೊಡಕ್ಟಿವಿಟಿ ಆ್ಯಂಡ್ ಅಕಾಡಮಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಸಮ್ಮೇಳನವು ನಗರದ ಹೊಟೇಲ್ ಶ್ರೀನಿವಾಸ್‌ನಲ್ಲಿ ನಡೆಯಿತು.

ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಸಿಎ ರಾಘವೇಂದ್ರ ರಾವ್ ಉದ್ಘಾಟಿಸಿ ಮಾತನಾಡಿ, ತರಗತಿ ಮತ್ತು ಅನುಭವಗಳಿಂದ ವಿದ್ಯಾರ್ಥಿಗಳು ಶಿಕ್ಷಣವನ್ನು ಸರಳವಾಗಿ ಪಡೆಯಲು ಅನುಕೂಲವಾಗುತ್ತದೆ. ಇಂಟರ್ನ್‌ಶಿಪ್ ಮತ್ತು ಅಭ್ಯಾಸಗಳು ವಿದ್ಯಾರ್ಥಿಗಳನ್ನು ವೃತ್ತಿ ರಂಗದಲ್ಲಿ ಮಿಂಚಲು ಅಪಾರ ಅವಕಾಶಗಳನ್ನು ಕಲ್ಪಿಸಿಕೊಡುತ್ತವೆ ಎಂದರು.

ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಡಾ.ವೈ.ಎಸ್. ಸಿದ್ದೇಗೌಡ ಮಾತನಾಡಿ, ಎಲ್‌ಪಿಜಿ ಯುಗವು ಹಲವು ಬದಲಾವಣೆಗಳನ್ನು ತಂದಿದೆ. ಮ್ಯಾನೇಜ್‌ಮೆಂಟ್ ಕ್ಷೇತ್ರವನ್ನು ಗಮನಿಸಿದರೆ ವಿಶ್ವದರ್ಜೆಯ ಬೆಂಚ್ ಮಾರ್ಕ್‌ಗಳು, ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್ ಗಳು ಉದ್ಯೋಗಿಗಳ ವಿಶ್ಲೇಷಣೆಗೆ ಒಂದು ಉತ್ತಮ ಉದಾಹರಣೆಗಳಾಗಿವೆ ಎಂದರು.

ಕೇರಳದ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಡಾ.ಜಿ.ಗೋಪಕುಮಾರ್, ವೆಂಚರ್ಸ್ ಆಫ್ ಗ್ಲೋಬಲ್ ಕ್ಯಾಲಿಫೋರ್ನಿಯ ಯುಎಸ್‌ಎ ಅಧ್ಯಕ್ಷ ವೆಂಕಟ್ ಎ. ಭಟ್ ಮಾತನಾಡಿದರು.

ಈ ಸಂದರ್ಭ ವೇದಿಕೆಯಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಸ್. ಐತಾಳ್, ಕುಲಸಚಿವ ಡಾ.ಅನಿಲ್‌ಕುಮಾರ್ ಉಪಸ್ಥಿತರಿದ್ದರು. ಸಮ್ಮೇಳನದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು ತಮ್ಮ ಸಂಶೋಧನ ಪತ್ರಿಕೆಗಳನ್ನು ಪ್ರಸ್ತುತಪಡಿಸಿದರು. 200ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಸ್ವೀಕರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News