370 ವಿಧಿ ರದ್ದತಿಯನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕ ಭೂಪೀಂದರ್ ಸಿಂಗ್ ಹೂಡಾ

Update: 2019-08-18 14:35 GMT

ಹೊಸದಿಲ್ಲಿ, ಆ.18: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾವನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಬೆಂಬಲಿಸುವ ಮೂಲಕ ಹರ್ಯಾಣದ ಪ್ರಮುಖ ಕಾಂಗ್ರೆಸ್ ನಾಯಕ ಭೂಪೀಂದರ್ ಸಿಂಗ್ ಹೂಡಾ ಎಲ್ಲರ ಹುಬ್ಬೇರಿಸಿದ್ದಾರೆ.

4 ದಶಕಗಳಿಗೂ ಅಧಿಕ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಈ ನಾಯಕ ಇದೀಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಆದರೆ ತಾನು ಕಾಂಗ್ರೆಸ್ ತೊರೆಯುವುದಿಲ್ಲ. ಭವಿಷ್ಯದ ನಿರ್ಧಾರಗಳನ್ನು ಕೈಗೊಳ್ಳುವುದಕ್ಕಾಗಿ 13 ಶಾಸಕರ ಸಮಿತಿಯನ್ನು ರಚಿಸಲಾಗುವುದು ಎಂದರು.

“370ನೆ ವಿಧಿಯನ್ನು ರದ್ದುಗೊಳಿಸಲಾಗಿದೆ. ನನ್ನ ಸಹೋದ್ಯೋಗಿಗಳು ಅದನ್ನು ವಿರೋಧಿಸಿದ್ದರು. ನನ್ನ ಪಕ್ಷವೂ ಸ್ವಲ್ಪ ದಾರಿ ತಪ್ಪಿದೆ. ಅದು ಹಳೆಯ ಕಾಂಗ್ರೆಸ್ ಅಲ್ಲ. ದೇಶಭಕ್ತಿ ಮತ್ತು ಸ್ವಾಭಿಮಾನದ ವಿಷಯದಲ್ಲಿ ನಾನು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ” ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News