ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ 18 ಬಲಿ

Update: 2019-08-18 14:51 GMT

ಶಿಮ್ಲಾ, ಆ.18: ಹಿಮಾಚಲ ಪ್ರದೇಶದಲ್ಲಿ ವಿವಿಧೆಡೆಗಳಲ್ಲಿ ರವಿವಾರ ಭಾರೀ ಮಳೆಯಿಂದಾಗಿ ಕನಿಷ್ಠ 18 ಜನರು ಮೃತಪಟ್ಟಿದ್ದಾರೆ. ಇತರ ಹಲವಾರು ಜನರು ಗಾಯಗೊಂಡಿದ್ದಾರೆ.

ಶಿಮ್ಲಾ ಜಿಲ್ಲೆಯೊಂದರಲ್ಲೇ ಎಂಟು ಜನರು ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಸಾವನ್ನಪ್ಪಿದ್ದು,ಶಿಮ್ಲಾ ಮತ್ತು ಕುಲು ಜಿಲ್ಲೆಗಳಲ್ಲಿ ಸೋಮವಾರ ಶಾಲಾಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಭಾರೀ ಮಳೆ ಇನ್ನೂ ಎರಡು ದಿನ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

ಕುಲು,ಸಿರವೌರ್,ಸೋಲನ್ ಮತ್ತು ಚಂಬಾ ಜಿಲ್ಲೆಗಳಲ್ಲಿ ತಲಾ ಇಬ್ಬರು ಹಾಗೂ ಉನಾ ಮತ್ತು ಲಹಾವುಲ್ ಸ್ಪಿತಿ ಜಿಲ್ಲೆಗಳಲ್ಲಿ ತಲಾ ಓರ್ವರು ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News