ಮೈತ್ರಿ ಸರಕಾರದ ಕಳ್ಳರು-ಸುಳ್ಳರು ಫೋನ್ ಕದ್ದಾಲಿಕೆ ಮಾಡಿದ್ದಾರೆ: ಶಾಸಕ ಶ್ರೀರಾಮುಲು

Update: 2019-08-18 15:59 GMT

ಬಳ್ಳಾರಿ, ಆ. 18: ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಎಂ ಯಡಿಯೂರಪ್ಪ ಸಿಬಿಐ ತನಿಖೆಗೆ ಒಪ್ಪಿಸಿರುವುದು ಸ್ವಾಗತಾರ್ಹ. ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿದ್ದ ಕಳ್ಳರು-ಸುಳ್ಳರು ಸೇರಿ ಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂದು ಶಾಸಕ ಶ್ರೀರಾಮುಲು ಟೀಕಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟೆಲಿಫೋನ್ ಕದ್ದಾಲಿಕೆಯಿಂದ ಈ ಹಿಂದೆ ರಾಮಕೃಷ್ಣ ಹೆಗಡೆಯವರ ಸರಕಾರ ಉರುಳಿತ್ತು. ಇದೀಗ ಸರಕಾರ ಉಳಿಸಿಕೊಳ್ಳಲು ಕುಮಾರಸ್ವಾಮಿ ಟೆಲಿಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂದು ದೂರಿದರು.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದ ಬಳಿಕ ಬೇರೆ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಕೃತ್ಯದಲ್ಲಿ ಕೆಲ ಅಧಿಕಾರಗಳ ಕೈವಾಡವೂ ಇದೆ. ಹೀಗಾಗಿ ಪ್ರಕರಣ ಸಿಬಿಐಗೆ ವಹಿಸಿದ್ದು, ಇದರಲ್ಲಿ ಯಾವುದೇ ರಾಜಕೀಯ ದುರದ್ದೇಶವಿಲ್ಲ ಎಂದು ಶ್ರೀರಾಮುಲು ಸ್ಪಷ್ಟನೆ ನೀಡಿದರು.

ಸಿದ್ದರಾಮಯ್ಯನವರಿಗೆ ಮರುಜನ್ಮ ನೀಡಿದ ನೆರೆಯಿಂದ ಹಾನಿಗೊಳಗಾದ ಬಾದಾಮಿ ಕ್ಷೇತ್ರಕ್ಕೆ ಒಮ್ಮೆಯೂ ಭೇಟಿ ನೀಡಿಲ್ಲ. ಕಣ್ಣು ನೋವಿದ್ದರೂ ಅವರು ದಿಲ್ಲಿಗೆ ಹೋಗಿ ಬಂದಿದ್ದಾರೆ. ಹೀಗಾಗಿ ಪ್ರಧಾನಿ ಮೋದಿಯವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಶ್ರೀರಾಮಯಲು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News