ಸುಪ್ರೀಂ ತೀರ್ಪಿನ ನಂತರ ಬಿಜೆಪಿ ಸೇರ್ಪಡೆ ಬಗ್ಗೆ ತೀರ್ಮಾನ: ಅನರ್ಹ ಶಾಸಕ ಪ್ರತಾಪ್‌ ಗೌಡ ಪಾಟೀಲ

Update: 2019-08-18 16:06 GMT

ಬೆಂಗಳೂರು, ಆ.18: ಸುಪ್ರೀಂ ಕೋಟ್ ತೀರ್ಪಿನ ನಂತರ ಬಿಜೆಪಿ ಸೇರುವ ಬಗ್ಗೆ ಅನರ್ಹ ಶಾಸಕರೆಲ್ಲ ಒಟ್ಟಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್‌ಗೌಡ ಪಾಟೀಲ ಸ್ಪಷ್ಟಪಡಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ವಿಧಾ ಸಭಾಧ್ಯಕ್ಷ ರಮೇಶ್ ಕುಮಾರ್ ನಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಆದರೆ, ಕೋರ್ಟ್‌ನಲ್ಲಿ ತೀರ್ಪು ನಮ್ಮ ಪರವಾಗಿ ಬರಲಿದೆ. ನಂತರ ಬಿಜೆಪಿ ಬಿಜೆಪಿ ಸೇರುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ

ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕುಟುಂಬದವರನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾನೇ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಅನರ್ಹರಾದರೆ ಸ್ಪರ್ಧಿಸಬಾರದು ಎಂಬ ನಿಯಮವಿಲ್ಲ. ಹೀಗಾಗಿ ಕ್ಷೇತ್ರದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚಿಸಿದ್ದೇನೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News