ಅಂಬೇಡ್ಕರ್ ಯುವಸೇನೆ ರಾಜ್ಯಾಧ್ಯಕ್ಷ ಕೋದಂಡರಾಮ ನಿಧನ

Update: 2019-08-18 17:13 GMT

ಬೆಂಗಳೂರು, ಆ. 18: ಅಂಬೇಡ್ಕರ್ ಯುವಸೇನೆಯ ರಾಜ್ಯಾಧ್ಯಕ್ಷ ಕೋದಂಡರಾಮ ಅನಾರೋಗ್ಯದಿಂದ ಇಲ್ಲಿನ ಕಮಲಾನರಗದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ನಗರದ ಸುಮನಹಳ್ಳಿಯಲ್ಲಿರುವ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ದಲಿತ ಚಳವಳಿಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕೋದಂಡರಾಮ, ಬಸವೇಶ್ವರ ನಗರ ಮುಖ್ಯರಸ್ತೆಯ ಅಗ್ರಹಾರ ದಾಸರಹಳ್ಳಿಯಲ್ಲಿರುವ ಕ್ರೀಡಾಂಗಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ಇಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಅಂಬೇಡ್ಕರ್ ವಿಚಾರಗಳನ್ನು ಎಲ್ಲ ವರ್ಗದ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮ್ಯೂಸಿಯಂವೊಂದನ್ನು ಸ್ಥಾಪಿಸಿದ್ದರು. ದಲಿತ ಚಳವಳಿಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಯುವಜನರಿಗಾಗಿ ವೃತ್ತಿಪರ ಕೌಶಲ, ಶೈಕ್ಷಣಿಕ ಮಾಹಿತಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ, ಉಚಿತ ಗ್ರಂಥಾಲಯ, ದೌರ್ಜನ್ಯಕ್ಕೊಳಗಾದ ಜನತೆಗೆ ಕಾನೂನು ನೆರವು ಹೀಗೆ ಹತ್ತು ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಬಿಎಸ್ಪಿ ಬೆಂಗಳೂರು ಉಸ್ತುವಾರಿ ಗುರುಮೂರ್ತಿ ಸ್ಮರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News