ಜಾಲ್ಸೂರ್: ಪಯನೀರ್ ಪಬ್ಳಿಕ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯೋತ್ಸವ

Update: 2019-08-18 18:36 GMT

ಸುಳ್ಯ: ಜಾಲ್ಸೂರಿನ ಪಯನೀರ್ ಪಬ್ಳಿಕ್ ಸ್ಕೂಲ್ ನಲ್ಲಿ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಧ್ವಜಾರೋಹಣ ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಆಚರಿಸಲಾಯಿತು. 

ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪಕಾಧ್ಯಕ್ಷ ಶ್ರೀ ಅಬ್ದುಲ್ ರಝಾಕ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ಪ ಗೌಡ, ಉಪಾಧ್ಯಕ್ಷೆ ಶೀಲಾವತಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ದಾನೇಶ್ವರಿ ಹಾಗೂ ಇತರ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. 

ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ವೇಳೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.  ಸಭಾ ಕಾರ್ಯಕ್ರಮದಲ್ಲಿ ಅಧ್ಯಾಪಕಿ ಅಮುದಾ ಅತಿಥಿಗಳನ್ನು ಸ್ವಾಗತಿಸಿದರೆ, ಸ್ಮಿತಾ ಅವರು ವಂದನಾರ್ಪಣೆಗೈದರು. ಫೌಝಿಯಾ ಅವರು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News