ಪಂಚಶಕ್ತಿ ಸೌಹಾರ್ದ ಸಹಕಾರಿಯಿಂದ 500 ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ

Update: 2019-08-18 18:44 GMT

ಮೂಡುಬಿದಿರೆ: ಇಲ್ಲಿನ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ವತಿಯಿಂದ ಸ್ವ-ಸಹಾಯ ಸಂಘದ ಸದಸ್ಯರಿಗೆ ಕೇಂದ್ರ ಸರಕಾರ ಆಯುಷ್ಮಾನ್ ಕಾರ್ಡನ್ನು ವಿತರಿಸುವ ಕಾರ್ಯಕ್ರಮವು  ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ರವಿವಾರ ನಡೆಯಿತು. 

 ಶಾಸಕ ಉಮಾನಾಥ ಕೋಟ್ಯಾನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಉತ್ತಮವಾದ ಆರೋಗ್ಯವೇ ನಮ್ಮೆಲ್ಲರ ಆಸ್ತಿ. ಬಡವರ ಜೀವಕ್ಕೆ ಭದ್ರತೆಯನ್ನು ಒದಗಿಸುವ ಕೇಂದ್ರ ಸರಕಾರದ ಉತ್ತಮವಾದ ಯೋಜನೆ ಇದಾಗಿದೆ. ಪಂಚಶಕ್ತಿ ಸೌಹಾರ್ದ ಸಹಕಾರಿ ಸಂಘವು ಬಡವರಿಗೆ ಅನುಕೂಲವಾಗುವಂತೆ ಈ ಕಾರ್ಡನ್ನು ವಿತರಿಸುವ ಕೆಲಸವನ್ನು ಕ್ಯಗೊಂಡಿದ್ದು ಶ್ಲಾಘನೀಯ. ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದರು.

ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ರಂಜಿತ್ ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ/ಶಶಿಕಲಾ ಆಯುಷ್ಮಾನ್ ಕಾರ್ಡ್‍ನ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಪಿ.ಕೆ ರಾಜು ಪೂಜಾರಿ, ಸಹಕಾರಿ ನಿಯಮಿತದ ಶಾಖಾಧಿಕಾರಿ ರಾಜಶೇಖರ್ ಮಧ್ಯಸ್ಥ ಉಪಸ್ಥಿತರಿದ್ದರು. 

ಸ್ವ-ಸಹಾಯ ಸಂಘದ ಒಟ್ಟು 500 ಮಂದಿ ಸದಸ್ಯರಿಗೆ ಈ ಸಂದರ್ಭದಲ್ಲಿ ಆಯುಷ್ಮಾನ್ ಕಾರ್ಡನ್ನು ವಿತರಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಸುರೇಶ್ ಕೆ.ಪೂಜಾರಿ ಸ್ವಾಗತಿಸಿದರು. ರಮೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ಉಷಾ ಭಂಡಾರಿ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News