ಕುಮಾರಸ್ವಾಮಿ ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ: ಯಡಿಯೂರಪ್ಪ

Update: 2019-08-19 06:00 GMT

ಬೆಂಗಳೂರು, ಆ.19: ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಈಗಾಗಲೇ ನಿರ್ಧರಿಸಲಾಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಅವರಿಂದು ಬೆಳಗ್ಗೆ ಮಾಧ್ಯಮದವರ ಜೊತೆ ಮಾತನಾಡುತ್ತಿದ್ದರು.
ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ತಮ್ಮ ಪುತ್ರ ವಿಜಯೇಂದ್ರ 
ವಿರುದ್ಧ ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಯಡಿಯೂರಪ್ಪ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಏನೇನು ಆಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಅದನ್ನು ನನ್ನ ಬಾಯಲ್ಲಿ ಏಕೆ ಹೇಳಿಸ್ತೀರಿ ಎಂದು ಪ್ರಶ್ನಿಸಿದರು. ಮಂಗಳವಾರ ಬೆಳಗ್ಗೆ 10:30ರಿಂದ 11:30ರೊಳಗೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭವು ರಾಜಭವನದಲ್ಲಿ ನಡೆಯಲಿದೆ. ಇದೊಂದು ಸರಳ ಕಾರ್ಯಕ್ರಮವಾಗಿರುತ್ತದೆ ಎಂದವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News