'ಲೈಂಗಿಕ ಕಿರುಕುಳ ತಡೆಗಟ್ಟುವಿಕೆ' ವಿಷಯದ ಕುರಿತು ಜಾಗೃತಿ ಕಾರ್ಯಕ್ರಮ

Update: 2019-08-19 12:10 GMT

ಕೋಡಿ: ಮಹಿಳಾ ದೌರ್ಜನ್ಯ ನಿವಾರಣಾ ಘಟಕ, ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು, ಕೋಡಿ ಕುಂದಾಪುರ ವತಿಯಿಂದ 'ಲೈಂಗಿಕ ಕಿರುಕುಳ ತಡೆಗಟ್ಟುವಿಕೆ' ವಿಷಯದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ.ಸೋನಿ ಡಿಸೋಜ ಮಾತನಾಡಿ, ವಿದ್ಯಾರ್ಥಿ ಜೀವನ ಅಮೂಲ್ಯವಾದುದು. ವಿದ್ಯಾರ್ಥಿನಿಯರು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಪ್ರೀತಿ, ಪ್ರೇಮ ಎನ್ನುವ ಆಮಿಷಗಳಿಗೆ ಒಳಗಾಗದೇ ತಮ್ಮನ್ನು ತಾವು ಹೇಗೆ ಕಾಪಾಡಿಕೊಳ್ಳಬೇಕು, ತಾವು ಧರಿಸುವ ಬಟ್ಟೆಯ ಬಗ್ಗೆ, ಪ್ರೀತಿ-ಪ್ರೇಮ ಮತ್ತು ಸಾಮಾಜಿಕ ಜಾಲತಾಣಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಮೌಲ್ಯಯುತವಾದ ಅರಿವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಶಮೀರ್ ವಹಿಸಿದ್ದರು. ಘಟಕದ ಯೋಜನಾಧಿಕಾರಿ ಕುಮಾರಿ ಕಾವ್ಯ, ಗಣಕ ಉಪನ್ಯಾಸಕಿ ಸ್ವಾಗತಿಸಿ, ವಿದ್ಯಾರ್ಥಿನಿ ತಸ್ಮಿಯಾ ಕಾರ್ಯಕ್ರಮ ನಿರೂಪಿಸಿದರು. ಘಟಕದ ವಿದ್ಯಾರ್ಥಿ ಅಧ್ಯಕ್ಷೆ ಅಂಬ್ರೀನ್ ವಂದಿಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News