×
Ad

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

Update: 2019-08-19 18:11 IST

ಜೈಪುರ, ಆ.19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಗೆ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಿಂಗ್ ವಿರುದ್ಧ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.

ಈ ಮೂಲಕ ಸಿಂಗ್ ಸತತ ಆರನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಈ ಮುನ್ನ ಐದು ಬಾರಿ ಅಸ್ಸಾಂನಿಂದ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದರೆ, ಈ ಬಾರಿ ರಾಜಸ್ಥಾನದಿಂದ ರಾಜ್ಯಸಭೆ ಪ್ರವೇಶಿಸಿದ್ದಾರೆ.

ಜೂನ್ ತಿಂಗಳಲ್ಲಿ ಬಿಜೆಪಿಯ ಮದಲ್‌ಲಾಲ್ ಸೈನಿ ಅವರ ನಿಧನದಿಂದಾಗಿ ಈ ಸ್ಥಾನ ತೆರವಾಗಿತ್ತು. ರಾಜಸ್ಥಾನದ ಒಟ್ಟು 10 ರಾಜ್ಯಸಭಾ ಸ್ಥಾನಗಳ ಪೈಕಿ ಒಂಬತ್ತು ಬಿಜೆಪಿ ವಶದಲ್ಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News