ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ವಶಕ್ಕೆ

Update: 2019-08-19 13:15 GMT

ಮಂಗಳೂರು, ಆ.19: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ದುಬೈಗೆ ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಸಿಐಎಸ್‌ಎಫ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಬೆಂಗಳೂರು ಮೂಲದ ಶಶಾಂಕ್ ಬೈಸಾನಿ ಗುಪ್ತ ಎಂಬಾತನಿಂದ 10 ಸಾವಿರ ಅಮೆರಿಕನ್ ಡಾಲರ್ ಕರೆನ್ಸಿಯನ್ನು ವಶಕ್ಕೆ ಪಡೆಯಲಾಗಿದೆ.
ಈತನು ಸೋಮವಾರ ಬೆಳಗ್ಗೆ 10 ಗಂಟೆಗೆ ಮಂಗಳೂರಿನಿಂದ ‘ಸ್ಪೈಸ್‌ಜೆಟ್ ನಂ.ಎಸ್‌ಜಿ-59’ ಮೂಲಕ ದುಬೈಗೆ ತೆರಳಲು ಯತ್ನಿಸಿದ್ದಾನೆ. ಈ ವೇಳೆ ಸಿಐಎಸ್‌ಎಫ್ ಸಿಬ್ಬಂದಿ ತಪಾಸಣೆ ನಡೆಸಿದಾಗ ಪ್ರಯಾಣಿಕನ ಬಳಿ ವಿದೇಶಿ ಕರೆನ್ಸಿ ಇರುವುದು ಪತ್ತೆಯಾಗಿದೆ. ಆತನಿಂದ 100 ಯುಎಸ್ ಡಾಲರ್ ಮುಖಬೆಲೆಯ 51 ನೋಟುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ವಿದೇಶಿ ಹಣದ ನೋಟಿನ ಕಂತೆಯನ್ನು ಪ್ರಯಾಣಿಕನು ಪ್ಯಾಂಟ್‌ನ ಜೇಬಿನಲ್ಲಿಟ್ಟು ಸಾಗಿಸುತ್ತಿದ್ದ. ಇನ್ನು ಕೆಲವು ನೋಟುಗಳನ್ನು ಹ್ಯಾಂಡ್‌ಬ್ಯಾಗ್‌ನಲ್ಲಿಟ್ಟು ಸಾಗಿಸುತ್ತಿರುವುದು ತಪಾಸಣೆ ವೇಳೆ ಪತ್ತೆಯಾಗಿದೆ. ಪ್ರಯಾಣಿನಿಂದ ವಶಕ್ಕೆ ಪಡೆದ ಕರೆನ್ಸಿಯನ್ನು ಸಿಐಎಸ್‌ಎಫ್ ಸಿಬ್ಬಂದಿ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನ ವಿಚಾರಣೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News