'ಛಾಯಾಗ್ರಾಹಕರಿಗೆ ಹೆಲ್ತ್ ಕಾರ್ಡ್' ಬಗ್ಗೆ ಚರ್ಚಿಸಿ ಕ್ರಮ: ಬಿಬಿಎಂಪಿ ಮೇಯರ್ ಗಂಗಾಂಬಿಕೆ

Update: 2019-08-19 14:41 GMT

ಬೆಂಗಳೂರು, ಆ.19: ಛಾಯಾಗ್ರಾಹಕರಿಗೆ ಹೆಲ್ತ್ ಕಾರ್ಡ್ ಹಾಗೂ ಸಂಘಕ್ಕೆ ಧನ ಸಹಾಯ ನೀಡುವ ಬಗ್ಗೆ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಭರವಸೆ ನೀಡಿದ್ದಾರೆ.

ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಿದ್ದ ವಿಶ್ವ ಛಾಯಾಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಛಾಯಾಗ್ರಾಹಕರು ತಮ್ಮ ವೃತ್ತಿಯಲ್ಲಿ ಆನೇಕ ಸವಾಲು ಸಮಸ್ಯೆಗಳನ್ನು ಎದುರಿಸಬೇಕಾಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ ಎಂದು ಹೇಳಿದರು.

ಛಾಯಾಚಿತ್ರ ತೆಗೆಯುಲು ತಮ್ಮ ಜೀವನವನ್ನೇ ಲೆಕ್ಕಿಸದೆ ತೆರಳುವ ಅವರಿಗೆ ಜೀವನದ ಭದ್ರತೆ ಅವಶ್ಯಕವಾಗಿದೆ. ಹೀಗಾಗಿ ಅವರ ಸಂಘಕ್ಕೆ ನೆರವು ನೀಡಲು ಪಕ್ಷಾತೀತವಾಗಿ ಎಲ್ಲ ನಾಯಕರು ಪ್ರಯತ್ನಿಸುವುದಾಗಿ ತಿಳಿಸಿದರು. ಅಲ್ಲದೆ, ಛಾಯಾಗ್ರಾಹಕರು ತೆಗೆದ ಛಾಯಾಚಿತ್ರಗಳು ಶಾಶ್ವತವಾಗಿ ಉಳಿದು ಅವು ಮುಂದಿನ ಪೀಳಿಗೆಗೆ ಸ್ಮರಣೀಯವಾಗಿರುತ್ತದೆ, ಹಾಗಾಗಿ ನಿಮ್ಮ ಕೊಡುಗೆ ಅಪಾರ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಮೇಯರ್ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್ ಹಾಗೂ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News