ಕಾಂಕ್ರಿಟ್ ರಸ್ತೆಯ ಮೇಲೆ ಬಿದ್ದು ವ್ಯಕ್ತಿ ಮೃತ್ಯು
Update: 2019-08-19 20:16 IST
ಬ್ರಹ್ಮಾವರ, ಆ.19: ನೀಲಾವರ ದೇವಸ್ಥಾನದ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಯತಪ್ಪಿ ಕಾಂಕ್ರಿಟ್ ರಸ್ತೆಯ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹಾವಂಜೆಯ ಬಸವ ಶೆಟ್ಟಿ(75) ಎಂದು ಗುರುತಿಸಲಾಗಿದೆ. ಇವರು ಆ.11ರಂದು ಮಧ್ಯಾಹ್ನ ದೇವಸ್ಥಾನದಲ್ಲಿ ಊಟ ಮಾಡಿ ಪಂಚಮಿ ಇಂಡಸ್ಟ್ರಿಸ್ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ಕಾಂಕ್ರಿಟ್ ರಸ್ತೆಯ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಉಡುಪಿಯ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ಆ.19ರಂದು ಬೆಳಗಿನ ಜಾವ 5.45ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.