ತೊಕ್ಕೊಟ್ಟು: ಕೆಟ್ಟು ನಿಂತ ಬಸ್; ಸಂಚಾರ ಅಸ್ತವ್ಯಸ್ತ

Update: 2019-08-19 16:49 GMT

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ66ರ ಕಲ್ಲಾಪುವಿನಿಂದ ತೊಕ್ಕೊಟ್ಟು ಜಂಕ್ಷನ್ ಸಂಪರ್ಕಿಸುವ ರಸ್ತೆಯ ನಡುವೆ ಬಸ್ಸೊಂದು ಕೆಟ್ಟು ನಿಂತ ಪರಿಣಾಮ ಸುಮಾರು ಒಂದೂವರೆ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.

ಬಳಿಕ ಸ್ಥಳೀಯರು ಸೇರಿ ಬಸ್ಸನ್ನು ದೂಡಿ ಸಂಚಾರಕ್ಕೆ ಮುಕ್ತಗೊಳಿಸಿದ್ದು, ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯಿಂದ ರಾತ್ರಿ ವೇಳೆ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತ್ತು. 

ಕಲ್ಲಾಪುವಿನಿಂದ ತೊಕ್ಕೊಟ್ಟು ಜಂಕ್ಷನ್ ಸಂಪರ್ಕಿಸುವ ರಸ್ತೆ ಅತ್ಯಂತ ಕಿರಿದಾಗಿದ್ದು ಸೋಮವಾರ ರಾತ್ರಿ ಮಂಗಳೂರಿನಿಂದ ತೊಕ್ಕೊಟ್ಟು ಮಾರ್ಗವಾಗಿ ಇನೋಳಿಗೆ ಸಂಚರಿಸುವ ಖಾಸಗಿ ಬಸ್ಸು ತಾಂತ್ರಿಕ ವೈಫಲ್ಯದಿಂದ ರಸ್ತೆ ನಡಯವೆ ಕೆಟ್ಟು ನಿಂತಿತ್ತು.

ರಾತ್ರಿಯ ವೇಳೆ ಬಸ್ಸು ಕೆಟ್ಟು ನಿಂತಿದ್ದರಿಂದ ಸುಮಾರು ಒಂದೂವರೆ ಗಂಟೆಗಳ ಕಾಲ ಸಂಚಾರಕ್ಕೆ ತೊಂದರೆಯಾಗಿದ್ದು ಸ್ಥಳೀಯರು ಕೆಟ್ಟು ನಿಂತಿದ್ದ ಬಸ್ಸನ್ನು ದೂಡಿ ಮುಂದಕ್ಕೆ ಚಲಿಸಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಮೇಲ್ಸೇತುವೆ ಕಾಮಗಾರಿ ನಡೆದ ಬಳಿಕ ಈ ರಸ್ತೆಯನ್ನು ಅಗಲೀಕರಣಗೊಳಿಸದೆ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದರಿಂದ ಪ್ರಯಾಣಿಕರು ಪರದಾಡಬೇಕಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News