ಬಂಧನದ ವಿರುದ್ಧ ಹೇಬಿಯಸ್ ಕಾರ್ಪಸ್ ರಿಟ್ ಸಲ್ಲಿಸಿದ ಮಾಜಿ ಐಎಎಸ್ ಅಧಿಕಾರಿ ಶಾ ಫೈಸಲ್

Update: 2019-08-19 16:58 GMT

ಹೊಸದಿಲ್ಲಿ, ಆ. 19: ದಿಲ್ಲಿ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ತನ್ನನ್ನು ವಶಕ್ಕೆ ತೆಗೆದುಕೊಂಡಿರುವುದನ್ನು ಪ್ರಶ್ನಿಸಿ ರಾಜಕಾರಣಿಯಾಗಿರುವ ಮಾಜಿ ಐಎಎಸ್ ಅಧಿಕಾರಿ ಶಾ ಫೈಸಲ್ ಸೋಮವಾರ ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ಹೇಬಿಯಸ್ ಕಾರ್ಪಸ್ ರಿಟ್ ಸಲ್ಲಿಸಿದ್ದಾರೆ.

 ರಿಟ್‌ಗೆ ಸಂಬಂಧಿಸಿದ ಮುಂದಿನ ವಿಚಾರಣೆಯನ್ನು ಆಗಸ್ಟ್ 23ಕ್ಕೆ ನಿಗದಿಗೊಳಿಸಿರುವ ನ್ಯಾಯಾಲಯ, ಕೇಂದ್ರ ಹಾಗೂ ಜಮ್ಮುಕಾಶ್ಮೀರ ಸರಕಾರದಿಂದ ಪ್ರತಿಕ್ರಿಯೆ ಕೋರಿದೆ. ಇಸ್ತಾಂಬುಲ್‌ಗೆ ತೆರಳಲು ವಿಮಾನ ಏರಲು ದಿಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಫೈಸಲ್ ಅವರನ್ನು ತಡೆಯಲಾಗಿತ್ತು. ಅನಂತರ ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿಯಲ್ಲಿ ವಶಕ್ಕೆ ತೆಗೆದುಕೊಂಡು ಶ್ರೀನಗರಕ್ಕೆ ಕರೆದೊಯ್ಯಲಾಗಿತ್ತು.

ಕೂಡಲೇ ಬಿಡುಗಡೆ ಮಾಡುವಂತೆ ಪ್ರಾಧಿಕಾರಕ್ಕೆ ನಿರ್ದೇಶಿಸುವಂತೆ ಕೋರಿರುವ ಫೈಸಲ್, ಜೀವಕ್ಕೆ ಅಪಾಯ ಇದೆ. ಕಾನೂನು ಬಾಹಿರವಾಗಿ ಬಂಧಿಸಿರುವುದು ಅಪಹರಣಕ್ಕೆ ಸಮಾನ ಎಂದು ನ್ಯಾಯಮೂರ್ತಿಗಳಾದ ಮನಮೋಹನ್ ಹಾಗೂ ಸಂಗೀತಾ ಧಿಂಗ್ರಾ ಸೆಹಗಲ್ ಅವರ ಪೀಠದ ಮುಂದೆ ಪ್ರತಿಪಾದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News