ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್: ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

Update: 2019-08-19 18:43 GMT

ಉಳ್ಳಾಲ: ವಿದ್ಯಾರ್ಥಿಗಳ ಕಲಿಕೆಯು ಕೇವಲ ಡಾಕ್ಟರ್ ಮತ್ತು ಇಂಜಿನಿಯರ್ ನಂತಹ ವೃತ್ತಿಪರ ಕ್ಷೇತ್ರಗಳಲ್ಲಿ ಸೀಟನ್ನು ಪಡೆಯುವುದೇ ಆಗಿರದೆ ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜೀವನ ಸಾರ್ಥಕತೆಯನ್ನು ಪಡೆಯಬೇಕು ಎಂದು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಇ. ಸಿ ವಿಭಾಗದ ಅಸಿಸ್ಟೆಂಟ್ ಫ್ರೊಫೆಸರ್ ಜಾನ್ಸನ್ ಟೆಲ್ಲೀಸ್ ಅಭಿಪ್ರಾಯಪಟ್ಟರು.

ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲಿನಲ್ಲಿ ಕೇಂದ್ರ ಸರಕಾರದ ಅನುದಾನದಿಂದ ಮಂಜುರಾದ ಅಟಲ್ ಟಿಂಕರಿಂಗ್ ಲ್ಯಾಬನ್ನು ಉದ್ಘಾಟಿಸಿ ಮಾತನಾಡಿದರು. 

ಅಟಲ್ ಟಿಂಕರಿಂಗ್ ಪ್ರಯೋಗಾಲಯವು ವಿದ್ಯಾರ್ಥಿಗಳಿಗೆ ಜೀವನಮುಖಿ ಕೌಶಲಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದ್ದು, ಇದರ ಪ್ರಯೋಜನವನ್ನು ಪಡೆದುಕೊಂಡು ಅದರ ಜ್ಞಾನವನ್ನು ಸಮಾಜದ ಪ್ರಗತಿ ಕಾರ್ಯದಲ್ಲಿ ಬಳಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಜೀವನದಲ್ಲಿ ಬರುವ ಯಾವುದೇ ಸಮಸ್ಯೆಯನ್ನು  ನಿರ್ಭಯವಾಗಿ ಎದುರಿಸಬೇಕೆಂದು ಅವರು ಹೇಳಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪೆÇ್ರ| ಎಂ.ಬಿ.ಪುರಾಣಿಕ್ ವಹಿಸಿದ್ದರು. ಶಾಲಾ ಪ್ರಾಂಶುಪಾಲೆ ಸುಷ್ಮಾ ದಿನಕರ್, ಆಡಳಿತಾ„ಕಾರಿ ವಿವೇಕ್ ತಂತ್ರಿ, ಶಾರದಾ ಡೇ ಬೋರ್ಡಿಂಗ್‍ನ ಪ್ರಾಂಶುಪಾಲ ಮೋಹನ್‍ದಾಸ್ ಹಾಗೂ  ಲತಾಂಜಲಿ ರೈ, ಉಪಪ್ರಾಂಶುಪಾಲ ದೀಪಾ ಶಂಕರ್ ಮತ್ತು ಪ್ರಶಾಂತ್ ಉಪಸ್ಥಿತರಿದ್ದರು. ಬೆನಕ ಮತ್ತುಶಿತಿಜ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News