ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮ

Update: 2019-08-19 18:53 GMT

ಉಳ್ಳಾಲ: ಕಳೆದ ಐದು ವರ್ಷಗಳಲ್ಲಿ ಟೈಲರ್ಸ್‍ಗಳ ಬಗ್ಗೆ ಧ್ವನಿ ಎತ್ತುವವರು ಯಾರೂ ಇರಲಿಲ್ಲ, ಇದೀಗ ತಾನು ಪ್ರತಿಪಕ್ಷದಲ್ಲಿದ್ದು ಮುಂದೆ ನಡೆಯುವ ಅಧಿವೇಶನದಲ್ಲಿ ಟೈಲರ್ಸ್‍ಗಳಿಗೆ ಭವಿಷ್ಯ ನಿಧಿ ಹಾಗೂ ಇನ್ನಿತರ ಪ್ರಮುಖ ಬೇಡಿಕೆಗಳ ಬಗ್ಗೆ ಧ್ವನಿ ಎತ್ತಲಾಗುವುದು ಎಂದು ಶಾಸಕ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಉಳ್ಳಾಲ ವಲಯ ಸಮಿತಿ ಆಶ್ರಯದಲ್ಲಿ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ರವಿವಾರ ನಡೆದ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಳ್ಳಾಲ ಕ್ಷೇತ್ರ ಬೆಳೆಯುತ್ತಿರುವುದರಿಂದ ತಾಲೂಕನ್ನಾಗಿ ಘೋಷಿಸಲಾಗಿದ್ದು, ಎಲ್ಲಾ ಇಲಾಖೆಗಳು ಶೀಘ್ರ ಕಾರ್ಯಾರಂಭಗೊಳ್ಳಲಿದೆ. ಮುಂದಿನ ಎರಡು ವರ್ಷಗಳಲ್ಲಿ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಹೇಳಿದರು.

ಮಂಗಳೂರು ಕಾರ್ಮಿಕ ಉಪ ವಿಭಾಗಾ„ಕಾರಿ ವಿಲ್ಮಾ ಎಲಿಜಬೆತ್ ತಾವ್ರೋ  ಮಾತನಾಡಿ, ವಿವಿಧ ಹಂತದಲ್ಲಿ ಅಸಂಘಟಿತ ವಲಯ ಕಾರ್ಮಿಕರಿದ್ದು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿರುವ ಟೈಲರ್ಸ್ ಗಳಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಸರ್ಕಾರದ ಮುಂದಿನ ಸವಲತ್ತುಗಳನ್ನು ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಡಾ.ತಾರಾನಾಥ್ ಶೆಟ್ಟಿ ಕೋಟೆಕಾರ್, ಅಕ್ಷರ ಸಂತ ಹರೇಕಳ ಹಾಜಬ್ಬ, ಸೋಮೇಶ್ವರ ಪಶ್ಚಿಮ್ ರಿಹೆಬಿಲಿಟೇಶನ್ ಸೆಂಟರ್ ನ ಸ್ಥಾಪಕ ರೋಹಿತ್ ಸಾಂತ್ರೂಜ್, ನಾಟಿವೈದ್ಯೆ ಪರಮೇಶ್ವರಿ ಇವರನ್ನು ಸನ್ಮಾನಿಸಲಾಯಿತು.

ಟೈಲರ್ಸ್ ಅಸೋಸಿಯೇಷನ್ ವಲಯಾಧ್ಯಕ್ಷ ಜಯಲಾಕ್ಷ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಕಾರ್ಯದರ್ಶಿ ವಸಂತ, ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್,  ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಸ್ಥಾಪಕ ಸದಸ್ಯ ನಾರಾಯಣ ಬಿ.ಎ., ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಅಧ್ಯಕ್ಷ ವೇಣುಗೋಪಾಲ್, ಬಂಟ್ವಾಳ ಅಧ್ಯಕ್ಷ ನಾಗೇಶ್ ಕೆ., ಹಿರಿಯ ಕಾರ್ಮಿಕ ಅಧಿಕಾರಿ ಮೇರಿ ಡಯಾಸ್, ಪ್ರಮುಖರಾದ ಕುಸುಮ ದೇವಾಡಿಗ, ಆನಂದ ಕೆ.ಎಸ್. ಮೊದಲಾದವರು ಉಪಸ್ಥಿತರಿದ್ದರು.

ದೇವದಾಸ್ ಕೆರೆಬೈಲ್ ಸ್ವಾಗತಿಸಿದರು. ರಮೇಶ್ ಮಾಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಜಾತ ಭಂಡಾರಿ ವಂದಿಸಿದರು. ನಾರಾಯಣ ಕುಂಪಲ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News