ಹೂಡೆ ಸಾಲಿಹಾತ್ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Update: 2019-08-20 14:05 GMT

ಉಡುಪಿ, ಆ.20: ತೋನ್ಸೆ ಹೂಡೆಯ ಸಾಲಿಹಾತ್ ಕಾಲೇಜಿನಲ್ಲಿ ಸದ್ಭಾವನಾ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಿ.ಇಮ್ತಿಯಾಝ್ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿಯೇ ಸಮಾನತೆ, ಐಕ್ಯತೆ, ಸೌಹಾರ್ದ ಭಾವನೆಗಳನ್ನು ಮೂಡಿಸಿಕೊಳ್ಳಬೇಕು. ಎಲ್ಲ ರೊಂದಿಗೆ ಕೂಡಿ ಬಾಳುವ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಸಾಲಿಹಾತ್ ಕಾಲೇಜಿನ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಾಲಿಹಾತ್ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಸಬೀನಾ, ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಶಬಾನಾ ಮುಮ್ತಾಜ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News