ನೂತನ ಸಚಿವ ಸಂಪುಟ ಬಿಬಿಎಂಪಿ ಬಜೆಟ್‌ಗೆ ಅನುಮೋದನೆ ನೀಡಲಿದೆ: ಮೇಯರ್ ಗಂಗಾಂಬಿಕೆ

Update: 2019-08-20 17:33 GMT

ಬೆಂಗಳೂರು, ಆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟವು ಬಿಬಿಎಂಪಿ ಬಜೆಟ್‌ಗೆ 2, 3 ದಿನಗಳೊಳಗಾಗಿ ಅನುಮೋದನೆ ನೀಡಲಿದೆ ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಿಬಿಎಂಪಿ ಬಜೆಟ್‌ಗೆ ಅನುಮೋದನೆ ನೀಡದೆ ತಡೆ ಹಾಕಿದ್ದಾರೆ. ಆದರೆ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಅಂಗೀಕಾರ ನೀಡಲಿದ್ದಾರೆ ಎಂದು ತಿಳಿಸಿದರು.

ನಗರದಲ್ಲಿ ನಡೆಯುತ್ತಿರುವ ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿದ್ದರಿಂದ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿದೆ. ಈಗಾಗಲೇ ನಡೆಯುತ್ತಿರುವ ಕಾಮಗಾರಿಗಳಿಗೂ ತೊಂದರೆಯಾಗಲಿದ್ದು, ಅಭಿವೃದ್ಧಿ ಕುಂಠಿತಗೊಳ್ಳಲಿದೆ. ವೈಟ್ ಟಾಪಿಂಗ್ ಮತ್ತು ಟೆಂಡರ್ ಶ್ಯೂರ್ ಯೋಜನೆಗಳಿಗೆ ಸರಕಾರ ನೀಡಿರುವ ಅನುದಾನವನ್ನು ಪರಿಶೀಲನೆ ಮಾಡಲಿ ಎಂದು ಅವರು ತಿಳಿಸಿದರು.

ನಗರದಲ್ಲಿ ಬಿಬಿಎಂಪಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಮತ್ತು ಟೆಂಡರ್ ಶ್ಯೂರ್ ಯೋಜನೆಗಳಿಗೆ ತಡೆ ಹಾಕಲಾಗಿದೆ. ಅಗತ್ಯಬಿದ್ದರೆ ತಾಂತ್ರಿಕ ಸಮಿತಿ ರಚಿಸಿ, ಪರಿಶೀಲನೆ ನಡೆಸಲಿ. ತಪ್ಪಿಸ್ಥರಿಗೆ ಶಿಕ್ಷೆಯಾಗಲಿ.

-ಗಂಗಾಂಬಿಕೆ, ಬಿಬಿಎಂಪಿ ಮೇಯರ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News