ದಾವಣಗೆರೆ ಜಿಲ್ಲಾಧಿಕಾರಿಯಾಗಿ ಮಹಾಂತೇಶ್ ಜಿ. ಬೀಳಗಿ ಅಧಿಕಾರ ಸ್ವೀಕಾರ

Update: 2019-08-20 18:20 GMT

ದಾವಣಗೆರೆ, ಆ.20: ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಮಹಾಂತೇಶ್ ಜಿ. ಬೀಳಗಿ ಇವರು ಅಧಿಕಾರ ವಹಿಸಿಕೊಂಡರು.

ಮಂಗಳವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ಅವರನ್ನು ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಅವರು ಪುಷ್ಪ ಗುಚ್ಚ ನೀಡಿ ಸ್ವಾಗತಿಸಿದರು. ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಬೀಳಗಿ ಅವರು ಬೀದರ್ ಜಿ.ಪಂ ನ ಕಾರ್ಯನಿರ್ವಾಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News