ಇನ್ನೆರಡು ದಿನಗಳಲ್ಲಿ ಖಾತೆಗಳ ಹಂಚಿಕೆ: ಮುಖ್ಯಮಂತ್ರಿ ಯಡಿಯೂರಪ್ಪ

Update: 2019-08-21 12:40 GMT

ಬೆಂಗಳೂರು, ಆ. 21: ಇನ್ನೆರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದರು.

ಬುಧವಾರ ಇಲ್ಲಿನ ಡಾಲರ್ಸ್‌ ಕಾಲನಿಯಲ್ಲಿನ ತನ್ನ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾಳೆ ಅಥವಾ ನಾಡಿದ್ದು, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವರಿಗೆ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕಾಗಿ ಜಿಲ್ಲೆಗಳನ್ನು ಹಂಚಿಕೆ ಮಾಡಿದ್ದು ಎಲ್ಲ ಸಚಿವರು ಪರಿಸ್ಥಿತಿ ಖುದ್ದು ಅಧ್ಯಯನಕ್ಕೆ ತೆರಳಿದ್ದಾರೆ. ಅವರೆಲ್ಲರೂ ಆಗಮಿಸಿದ ಬಳಿಕ ಕೇಂದ್ರಕ್ಕೆ ವರದಿ ಸಲ್ಲಿಸುವ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News