‘ಸಹಕಾರಿ ಸಂಘಗಳು ಜನಸಾಮಾನ್ಯರ ಪಾಲಿಗೆ ವರದಾನ'

Update: 2019-08-21 16:12 GMT

ಉದ್ಯಾವರ, ಆ.21: ಸಹಕಾರಿ ಸಂಘಗಳು ಇಂದು ಜನಸಾಮಾನ್ಯರ ಮನೆ ಬಾಗಿಲಿಗೆ ಆರ್ಥಿಕ ಸಹಾಯವನ್ನು ತಲುಪಿಸಿ ಅವರ ಆರ್ಥಿಕ ಪ್ರಗತಿಗೆ ಕಾರಣವಾಗಿವೆ. ಆದುದರಿಂದ ಎಲ್ಲಾ ಸಹಕಾರಿ ಸಂಸ್ಥೆಗಳು ಮಹತ್ತರ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಮಾಜಿ ಶಾಸಕ ವಿನಯಕುಮಾರ್ ಸೊರಕೆ ಹೇಳಿದ್ದಾರೆ.

ಉದ್ಯಾವರದಲ್ಲಿ ಕೆಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿ ಶೋಕಮಾತಾ ಇಗರ್ಜಿಯ ಧರ್ಮಗುರುಗಳಾದ ವಂ. ವಲೇರಿಯನ್ ಮೆಂಡೊನ್ಸಾ ಆಶೀರ್ವಚನ ನೀಡಿದರು. ಸಹಕಾರಿ ಸಂಘದ ಅಧ್ಯಕ್ಷ ಫೆಲಿಕ್ಸ್ ಪಿಂಟೊ ಅಧ್ಯಕ್ಷತೆ ವಹಿಸಿದ್ದು ಅತಿಥಿಗಳನ್ನು ಸ್ವಾಗತಿಸಿದರು.

ಉದ್ಯಾವರದ ಉದ್ಯಮಿ ಹಾಜಿ ಅಬ್ದುಲ್ ಜಲೀಲ್ ಸಾಹೇಬ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್, ಉದ್ಯಾವರ ಗ್ರಾಪಂ ಅಧ್ಯಕ್ಷೆ ಸುಂಗಧಿ ಶೇಖರ್, ಸದಸ್ಯ ಲೊರೆನ್ಸ್ ಡೇಸಾ, ಸುರೇಂದ್ರ ಶೆಣೈ ಉಪಸ್ಥಿತರಿದ್ದರು.

ಸೊಸೈಟಿಯ ನಿರ್ದೇಶಕರಾದ ಇಗ್ನೇಷಿಯಸ್ ಮೊನಿಸ್, ಅಲೋಸಿಯಸ್ ಡಿ ಆಲ್ಮೇಡಾ, ಪ್ರಾಂಕ್ಲಿನ್ ಮಿನೇಜಸ್, ಲೂವಿಸ್ ಲೋಬೊ, ಪರ್ಸಿ ಡಿಸೋಜ, ಆರ್ಚ್‌ಬೋಲ್ಡ್ ಡಿಸೋಜ, ಶೇವಿನ್ ಪಿರೇರಾ, ಜೆಸಿಂತಾ ಡಿಸೋಜ, ಹಿಲ್ಡಾ ಸಲ್ಡಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫ್ರಾಂಕ್ ಕಾರ್ಡೋಜಾ ವರದಿ ವಾಚಿಸಿದರೆ, ಉಪಾಧ್ಯಕ್ಷ ಜೇಮ್ಸ್ ಡಿಸೋ ವಂದಿಸಿ, ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News