ಆ. 25ಕ್ಕೆ ವಿದ್ಯಾಪೋಷಕ್ ವಿನಮ್ರ ಸಹಾಯ ಕಾರ್ಯಕ್ರಮ

Update: 2019-08-21 16:15 GMT

ಉಡುಪಿ, ಆ.21: ಉಡುಪಿ ಯಕ್ಷಗಾನ ಕಲಾರಂಗದ ಅಂಗಸಂಸ್ಥೆ ವಿದ್ಯಾಪೋಷಕ್‌ನ ಹದಿನೈದನೇ ವರ್ಷದ ವಿನಮ್ರ ಸಹಾಯ ಕಾರ್ಯಕ್ರಮವು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಆ.25ರ ರವಿವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.

ಬೆಳಗ್ಗೆ 10 ಕ್ಕೆ ಅದಮಾರು ಮಠದ ಶ್ರೀಈಶಪ್ರಿಯತೀರ್ಥರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಉದ್ಯಮಿ ಡಾ.ಪಿ.ಸದಾನಂದ ಮಯ್ಯ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಸಿಂಡಿಕೇಟ್ ಬ್ಯಾಂಕ್‌ನ ಜಿಎಂ ಭಾಸ್ಕರ ಹಂದೆ, ಆದರ್ಶ ಆಸ್ಪತ್ರೆ ವರಿಷ್ಠ ಡಾ. ಜಿ.ಎಸ್. ಚಂದ್ರಶೇಖರ್ ಭಾಗವಹಿಸಲಿದ್ದಾರೆ.

ಅಪರಾಹ್ನ 3 ಕ್ಕೆ ಸಹಾಯಧನ ವಿತರಣೆ ನಡೆಯಲಿದ್ದು, ಪರ್ಯಾಯ ಶ್ರೀಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ನಾಡೋಜ ಜಿ.ಶಂಕರ್ ವಹಿಸಲಿದ್ದಾರೆ. ಗೀತಾನಂದ ಪೌಂಡೇಶನ್ ಮಣೂರು ಇದರ ಅಧ್ಯಕ್ಷ ಆನಂದ ಸಿ. ಕುಂದರ್ ಶುಭಾಶಂಸನೆ ಗೈಯಲಿದ್ದಾರೆ. ಈ ವರ್ಷ ಒಟ್ಟು 1150 ವಿದ್ಯಾರ್ಥಿಗಳಿಗೆ 85 ಲಕ್ಷ ರೂ. ಸಹಾಯಧನ ವಿತರಿಸಲಾಗುವುದು ಎಂದು ಅಧ್ಯಕ್ಷ ಕೆ. ಗಣೇಶ್ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News