ಟಿಡಿಆರ್ ಹಗರಣ: ಕೃಷ್ಣಲಾಲ್ ಪ್ರಕರಣ ರದ್ದು ಕೋರಿ ಅರ್ಜಿ ಎಸಿಬಿಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

Update: 2019-08-21 18:01 GMT

ಬೆಂಗಳೂರು, ಆ.21: ಬಿಬಿಎಂಪಿ ಟಿಡಿಆರ್ ಹಗರಣದ ಪ್ರಮುಖ ಆರೋಪಿ ಬಿಡಿಎ ಎಇಇ ಕೃಷ್ಣಲಾಲ್ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಎಸಿಬಿಗೆ ನೋಟಿಸ್ ಜಾರಿಗೊಳಿಸಿ ಆದೇಶಿಸಿದೆ.

ಈ ಕುರಿತು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ವೇಳೆ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ನಿಗದಿಗಿಂತ ಹೆಚ್ಚು ಹಣ ಪಡೆದ ಆರೋಪದಡಿ ಎಸಿಬಿ ದಾಳಿ ಮಾಡಿತ್ತು. ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗುತ್ತದೆ ಎನ್ನುವ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಕೃಷ್ಣಲಾಲ್ ಮತ್ತು ಸಹಚರರ ಮೇಲೆ ಎಸಿಬಿ ದಾಳಿ ನಡೆಸಿತ್ತು. ಆದರೆ, ಆರೋಪಿ ಕೃಷ್ಣಲಾಲ್ ಎಸಿಬಿ ದಾಖಲಿಸಿದ್ದ ಕೇಸ್‌ಗೆ ಲೋಕಾಯುಕ್ತ ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದರು.

ಇದಕ್ಕೆ ಎಸಿಬಿ ಆಕ್ಷೇಪಣೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕಳೆದ ಮೇ 27ರಂದು ಲೋಕಾಯುಕ್ತ ವಿಶೇಷ ಕೋರ್ಟ್‌ನಲ್ಲಿ ಜಾಮೀನು ರದ್ದು ಮಾಡಿತ್ತು. ಈ ಆದೇಶ ಪ್ರಶ್ನಿಸಿ ಹಾಗೂ ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News