ವಿನಾಯಕ ಬಾಳಿಗಾ ಕೊಲೆ ಪ್ರಕರಣ: ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ತಡೆ

Update: 2019-08-21 18:02 GMT

ಬೆಂಗಳೂರು, ಆ.21: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.

ಈ ಕುರಿತು ವಿನಾಯಕ ಬಾಳಿಗಾ ಪರವಾಗಿ ವಾದಿಸಲು ಎನ್.ರವೀಂದ್ರನಾಥ್ ಕಾಮತ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ಸರಕಾರ ನೇಮಿಸಿರುವ ಆದೇಶವನ್ನು ರದ್ದುಕೋರಿ ಯುವ ಬ್ರಿಗೇಡ್‌ನ ನಾಯಕ ನರೇಶ್ ಶೈಣೆ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು. ನ್ಯಾಯಪೀಠವು ವಕೀಲರ ವಾದ ಆಲಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿತು.

ಪ್ರಕರಣದ ಹಿನ್ನೆಲೆ: ಮಂಗಳೂರಿನಲ್ಲಿ ವಿನಾಯಕ ಬಾಳಿಗಾ ಅವರನ್ನು ಅವರ ಮನೆಯ ಮುಂದೆಯೇ ದುಷ್ಕರ್ಮಿಗಳು ದಾರುಣವಾಗಿ ಹತ್ಯೆಗೈಯಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವ ಬ್ರಿಗೇಡ್‌ನ ನಾಯಕ ನರೇಶ್ ಶೈಣೆ ಸೇರಿ ಇನ್ನಿತರರನ್ನು ಬಂಧಿಸಿದ್ದರು. ಈ ಪ್ರಕರಣದ ವಿಚಾರಣೆ ಸದ್ಯ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News