ಯಾವುದೇ ಸಾಕ್ಷ್ಯ ಇಲ್ಲ, ಕೊಲೆ ಆರೋಪಿ ಮಹಿಳೆಯ ಹೇಳಿಕೆ ಆಧಾರದಲ್ಲಿ ಚಿದಂಬರಂ ಬಂಧನ : ಕಾಂಗ್ರೆಸ್ ಆಕ್ರೋಶ

Update: 2019-08-22 09:29 GMT

ಹೊಸದಿಲ್ಲಿ, ಆ.22: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವೆ ಪಿ.ಚಿದಂಬರಂ ವಿರುದ್ಧ  ಬಂಧನಕ್ಕೆ ಯಾವುದೇ ಸಾಕ್ಷ್ಯ ಇಲ್ಲ.  ಆದರೆ ಕೊಲೆ ಆರೋಪಿ ಮಹಿಳೆ ನೀಡಿರುವ ಹೇಳಿಕೆಯ ಆಧಾರದಲ್ಲಿ ಬಂಧಿಸಲಾಗಿದೆ ಎಂದು  ಕಾಂಗ್ರಸ್ ಇಂದು ಆಕ್ರೋಶ ವ್ಯಕ್ತಪಡಿಸಿದೆ.

 ದೇಶದ ಪ್ರಮುಖ ತನಿಖಾ ಸಂಸ್ಥೆಗಳಾದ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಿಜೆಪಿ ಸರಕಾರದ  ವೈಯುಕ್ತಿಕ ಸೇಡು ತೀರಿಸಿಕೊಳ್ಳುವ ಇಲಾಖೆಗಳಾಗಿ ಮಾರ್ಪಟ್ಟಿವೆ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

ಕೇಂದ್ರದ ಮಾಜಿ ಸಚಿವೆ ಪಿ.ಚಿದಂಬರಂ  ಬಂಧನದ ಹಿನ್ನೆಲೆಯಲ್ಲಿ  ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಇಂದು ತನ್ನ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ತನ್ನ ವೈಯುಕ್ತಿಕ ಸೇಡಿಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅವರು ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದ ಇತರೆ ಆರೋಪಿಗಳಾರು ಬಂಧನಕ್ಕೀಡಾಗಿಲ್ಲ. ಹಾಗಿರುವಾಗ  40 ವರ್ಷಗಳಿಂದ  ಸಾರ್ವಜನಿಕ ಜೀವನದಲ್ಲಿದ್ದುಕೊಂಡು  ದೇಶಕ್ಕೆ ಅನನ್ಯ ಕೊಡುಗೆ ನೀಡಿದ ನಾಯಕರೊಬ್ಬರನ್ನು ಬಂಧಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿರುವ ರಣದೀಪ್ ಸುರ್ಜೆವಾಲಾ ಅವರು ಮಗಳನ್ನೇ ಕೊಲೆ ಮಾಡಿ  ಜೈಲಿನಲ್ಲಿರುವ ಮಹಿಳೆ ನೀಡಿರುವ ಹೇಳಿಕೆಯ ಸತ್ಯಕ್ಕೆ ದೂರವಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News