ಆ.23ರಿಂದ ರಾಜ್ಯ ಅಂತರ ಜಿಲ್ಲಾ ಕಿರಿಯರ ಕ್ರೀಡಾಕೂಟ

Update: 2019-08-22 13:12 GMT

ಉಡುಪಿ, ಆ.22: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ವತಿಯಿಂದ ನಿಟ್ಟೆ ಎಜ್ಯುಕೇಶನ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಮಟ್ಟದ ಅಂತರ ಜಿಲ್ಲಾ ಕಿರಿಯರ ಕ್ರೀಡಾಕೂಟವನ್ನು ಆ.23ರಿಂದ 25ರವರೆಗೆ ಅಜ್ಜರಕಾಡುಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಕ್ರೀಡಾಕೂಟದಲ್ಲಿ ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಫೋಟೋ ಫಿನಿಶ್ ತಂತ್ರಜ್ಞಾನವನ್ನು ಬಳಸಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿ ಗಳು ಈಗಾಗಲೇ ಜಿಲ್ಲೆಗೆ ಆಗಮಿಸಿದ್ದಾರೆ. 100 ಜನ ಅಧಿಕಾರಿಗಳು, 100 ಸ್ವಯಂ ಸೇವಕರು ಕ್ರೀಡಾಕೂಟ ಯಶಸ್ವಿಗೆ ಸಹಕರಿಸಲಿರುವರು ಎಂದು ಕ್ರೀಡಾ ಕೂಟ ಸಂಘಟನಾ ಸಮಿತಿಯ ಅಧ್ಯಕ್ಷ, ಶಾಸಕ ಕೆ.ರಘುಪತಿ ಭಟ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.

14, 16, 18, 20ರ ವಯೋಮಾನಗಳಲ್ಲಿ ಹಾಗೂ 130 ವಿಭಾಗಗಳಲ್ಲಿ ಸ್ಪಧೆರ್ ನಡೆಯಲಿದ್ದು, ಈ ಕ್ರೀಡಾಕೂಟಕ್ಕೆ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆ ಗಳಿಂದ ಸುಮಾರು 1700 ಕ್ರೀಡಾಪಟುಗಳು ನೋಂದಣಿ ಮಾಡಿಕೊಂಡಿ ದ್ದಾರೆ. ಈ ಕ್ರೀಡಾಕೂಟದ ಕೊನೆಯಲ್ಲಿ ಸೆ.11ರಿಂದ 14ರವರೆಗೆ ಉಡುಪಿಯಲ್ಲಿ ನಡೆಯಲಿರುವ ಅಖಿಲ ಭಾರತ ದಕ್ಷಿಣ ವಲಯ ಕಿರಿಯರ ಕ್ರೀಡಾಕೂಟಕ್ಕೆ ಕರ್ನಾಟಕ ತಂಡವನ್ನು ಆಯ್ಕೆ ಮಾಡಲಗುವುದು ಎಂದರು.

ಆ.23ರಂದು ಬೆಳಗ್ಗೆ 9ಗಂಟೆಗೆ ಕ್ರೀಡಾಕೂಟವನ್ನು ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ವಹಿಸಲಿರುವರು. ಜಿಪಂ ಅಧ್ಯಕ್ಷ ದಿನಕರ ಬಾಬು ಧ್ವಜಾರೋಹಣ ನೆರವೇರಿಸಲಿರುವರು. ಸಮಾರೋಪ ಸಮಾ ರಂಭದ ಅಧ್ಯಕ್ಷತೆಯನ್ನು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಚಿಪ್ಲೂಣ್‌ಕರ್ ವಹಿಸಲಿರುವರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಅಧ್ಯಕ್ಷ ರಘು ರಾಮ ನಾಯಕ್, ಸಮಿತಿಯ ಸಂಘಟನಾ ಕಾರ್ಯದರ್ಶಿ ಮಹೇಶ್ ಠಾಕೂರ್, ಸಂಸ್ಥೆಯ ಕಾರ್ಯದರ್ಶಿ ದಿನೇಶ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News