ಮಾದಕ ವಸ್ತು ಮಾರಾಟ: ಆರೋಪಿ ಬಂಧನ

Update: 2019-08-22 16:46 GMT

ಬೆಂಗಳೂರು, ಆ.22: ಮಾದಕ ವಸ್ತು ಕೊಕೇನ್ ಮಾರಾಟ ಆರೋಪದಡಿ ಓರ್ವನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನೈಜೀರಿಯಾ ದೇಶದ ಚಿಬುಕೋ ಜಾನ್‌ಬಾಸ್ಕೋ(39) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಕೆರೆ ಗ್ರಾಮ ಬಂಜಾರ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ನೈಜೀರಿಯಾ ಮೂಲದ ವ್ಯಕ್ತಿ ಕೊಕೇನ್ ಎಂಬ ಮಾದಕ ವಸ್ತು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತನಿಂದ 20 ಗ್ರಾಂ ಕೊಕೇನ್, ಮೊಬೈಲ್, 5 ಸಾವಿರ ರೂ.ನಗದು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ರಾಮಮೂರ್ತಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News