ಸುಳ್ಯ: ಕೃಷ್ಣರಾಜ ಕ್ಷೇತ್ರದ ಶಾಸಕರ ಕಾರು ಅಪಘಾತ

Update: 2019-08-23 04:33 GMT

ಸುಳ್ಯ, ಆ.23: ಮೈಸೂರು ಕೃಷ್ಣ ರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಜಾಲ್ಸೂರಿನಲ್ಲಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ.

ಘಟನೆಯಲ್ಲಿ ಶಾಸಕ ರಾಮದಾಸ್ ಹಾಗೂ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಸಹೋದರನ ಪುತ್ರ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News