ಅನರ್ಹ ಶಾಸಕರ ಹೊಸದಿಲ್ಲಿ ಭೇಟಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಅಲ್ಲ: ಸಚಿವ ಡಾ.ಅಶ್ವಥ್ ನಾರಾಯಣ್ ಸ್ಪಷ್ಟನೆ

Update: 2019-08-23 05:15 GMT

ಬೆಂಗಳೂರು, ಆ.23: ಅನರ್ಹ ಶಾಸಕರು ಕೋರ್ಟ್ ವಿಚಾರಕ್ಕಾಗಿ ಹೊಸದಿಲ್ಲಿಗೆ ಬಂದಿದ್ದಾರೆ. ಅನರ್ಹತೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯನ್ನು ತ್ವರಿತವಾಗಿ ಆರಂಭಿಸಲು ಅಗತ್ಯ ರೂಪುರೇಷೆ ಸಿದ್ಧಪಡಿಸುವ ಸಲುವಾಗಿಅವರು ದಿಲ್ಲಿಯಲ್ಲಿ ಬೀಡುಬಿಟ್ಟಿದ್ದಾರೆ. ಕಾನೂನಾತ್ಮಕ ಅಡೆತಡೆ ಸರಿಪಡಿಸಿಕೊಳ್ಳಲು ಎಲ್ಲ ಪ್ರಯತ್ನ ನಡೆಸಿದ್ದಾರೆ. ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರುವ ಕೆಲಸವನ್ನು ಯಾರು ಮಾಡಿಲ್ಲ ಎಂದು ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರಿಗೆ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಅನ್ಯಾಯ ಮಾಡಿದ್ದಾರೆ. ಈ ಸಂಬಂಧ ಅವರು ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಅನರ್ಹರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಮಾಡುವ ವಿಚಾರದ ಮಾಹಿತಿಯಿಲ್ಲ ಎಂದರು.

ಸಚಿವ ಸ್ಥಾನ ವಂಚಿತರಾಗಿರುವ ಉಮೇಶ್ ಕತ್ತಿ ಜತೆ ಮುಖ್ಯಮಂತ್ರಿ ಮಾತುಕತೆ ನಡೆಸಿದ್ದಾರೆ. ಕತ್ತಿ ಅಸಮಾಧಾನ ತೋಡಿಕೊಂಡಿಲ್ಲ. ಪಕ್ಷದ ಹಿರಿಯ ನಾಯಕರು ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ. ನೂತನ ಸಚಿವರ ಖಾತೆ ಹಂಚಿಕೆ ಬಹುತೇಕ ಇಂದು ಅಂತಿಮವಾಗುವ ಸಾಧ್ಯತೆಗಳಿವೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News