ಬಂಧನ ವಿರುದ್ಧ ಚಿದಂಬರಂ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಸುಪ್ರೀಂ

Update: 2019-08-23 07:35 GMT

ಹೊಸದಿಲ್ಲಿ, ಆ.23: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಕಸ್ಟಡಿಗೆ ಒಳಪಡುವ ಮುನ್ನ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಬಂಧನದಿಂದ ಪಾರಾಗಲು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. 

ದಿಲ್ಲಿ ಹೈಕೋರ್ಟ್ ಚಿದಂಬರಂಗೆ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಬಳಿಕ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ತಾಂತ್ರಿಕ ಕಾರಣದಿಂದ ಚಿದಂಬರಂ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿತ್ತು.

ಬುಧವಾರ ನಡೆದ ಹೈಡ್ರಾಮಾದಲ್ಲಿ ಸಿಬಿಐ ಅಧಿಕಾರಿಗಳು ಕಾಂಗ್ರೆಸ್ನ ಹಿರಿಯ ನಾಯಕನನ್ನು ಅವರ ಮನೆಗೆ ತೆರಳಿ ಬಂಧಿಸಿದ್ದರು. ಗುರುವಾರ ಸಿಬಿಐ ವಿಶೇಷ ನ್ಯಾಯಾಲಯ ಚಿದಂಬರಂ ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿತ್ತು. ಹೀಗಾಗಿ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನ್ಯಾಯಾಲಯ ಮುಂದೂಡಿದೆ.

ಜಾರಿ ನಿರ್ದೇಶನಾಲಯದ(ಈಡಿ) ಬಂಧನದಿಂದ ತನ್ನನ್ನು ರಕ್ಷಿಸುವಂತೆ ಚಿದಂಬರಂ ಸಲ್ಲಿಸಿರುವ ಅರ್ಜಿಯನ್ನು ಉಚ್ಚ ನ್ಯಾಯಾಲಯ ಶುಕ್ರವಾರ ವಿಚಾರಣೆ ನಡೆಸಲಿದೆ. ಚಿದಂಬರಂ ಈಗಾಗಲೇ ಸಿಬಿಐ ವಶದಲ್ಲಿರುವ ಕಾರಣ ಖಾಯಂ ಜಾಮೀನಿಗೆ ಹೊಸತಾಗಿ ಅರ್ಜಿ ಸಲ್ಲಿಸಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News