ಬೀದಿ ನಾಯಿ ದಾಳಿಗೆ ಜಿಂಕೆ ಸಾವು

Update: 2019-08-23 11:35 GMT

ಹನೂರು, ಆ.23: ಬೀದಿ ನಾಯಿ ದಾಳಿಗೆ ಸುಮಾರು 6 ವರ್ಷದ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗಾಣಿಗಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಪ್ರದೇಶದಿಂದ ದಾರಿ ತಪ್ಪಿ ಗಾಣಿಗಮಂಗಲ‌ ಗ್ರಾಮಕ್ಕೆ ಬಂದಿದ್ದ ಜಿಂಕೆಯ ಮೇಲೆ ನಾಯಿಗಳು ಎರಗಿ ಗಾಯಗೊಳಿಸಿದ ಪರಿಣಾಮ ಜಿಂಕೆ ಸಾವನ್ನಪ್ಪಿದೆ.

ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News