ನಳಿನ್ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿ: ವಕೀಲ ಚಂದ್ರಶೇಖರ ಪೂಜಾರಿ ಒತ್ತಾಯ

Update: 2019-08-23 16:22 GMT

ಬಂಟ್ವಾಳ, ಆ. 23: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ಸಂಸದರಾಗಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ರಾಜ್ಯಾಧ್ಯಕ್ಷರಾದರೆ ಜಿಲ್ಲೆಯನ್ನು 20 ವರ್ಷಗಳ ಹಿಂದಕ್ಕೆ ಕೊಂಡೊಯ್ಯಬಹುದು. ಆದ್ದರಿಂದ ಮೊದಲು ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿ, ಬಳಿಕ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ಬಂಟ್ವಾಳದ ನೋಟರಿ, ವಕೀಲ ಚಂದ್ರಶೇಖರ ಪೂಜಾರಿ ಒತ್ತಾಯಿಸಿದ್ದಾರೆ.

ಈ ಕುರಿತು ಅವರು ಪತ್ರಿಕಾ ಪ್ರಕಟನೆಯನ್ನು ನೀಡಿದ್ದು, ನಳಿನ್ ಕುಮಾರ್ ಕಟೀಲ್ ಅಧ್ಯಕ್ಷ ಪದವಿ ಅಲಂಕರಿಸುವ ಮೊದಲು ಗಾಂಧೀಜಿಯ ಕುರಿತು ಆಡಿದ ಮಾತಿಗೆ ಕ್ಷಮೆ ಯಾಚಿಸಬೇಕು. ಕಳೆದ ಚುನಾವಣೆಯಲ್ಲಿ ಮತದಾರರು ನಳಿನ್ ಗಮನದಲ್ಲಿರಿಸದೆ ಮೋದಿ ಹೆಸರಲ್ಲಿ ಮತ ಹಾಕಿದ್ದರು ಎಂದವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News