ಆ. 27ರಂದು ಉಚಿತ ಕಣ್ಣಿನ ಚಿಕಿತ್ಸೆ, ಕನ್ನಡಕ ವಿತರಣೆ

Update: 2019-08-23 16:23 GMT

ಬಂಟ್ವಾಳ, ಆ. 23: ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ, ಮರಾಠಿ ಸಮಾಜ ಸೇವಾ ಸಂಘ ಕಲ್ಲಡ್ಕ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಆ. 27ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12:30ರವರೆಗೆ ಕಲ್ಲಡ್ಕದ ಮರಾಠಿ ಭವನ ಶಿವಾಜಿನಗರ ಪೂರ್ಲಿಪಾಡಿ ನಡೆಯಲಿದೆ.

ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆಯಬೇಕಾಗಿ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News